Advertisement
Advertisement
Bhagyada Lakshmi Baramma – S.Janaki – S.JANAKI Lyrics

Singer | S.JANAKI |
ಭಾಗ್ಯದ ಲಕ್ಷ್ಮಿ ಬಾರಮ್ಮ ನಮ್ಮಮ್ಮ ನೀ
ಸೌಭಾಗ್ಯದ ಲಕ್ಷ್ಮಿ ಬಾರಮ್ಮ ||ಪಲ್ಲವಿ ||
ಹೆಜ್ಜೆಯ ಮೇಲೆ ಹೆಜ್ಜೆಯ ನಿಕ್ಕುತ ಗೆಜ್ಜೆಯ ಕಾಲಿನ ನಾದವ ತೋರುತ
ಸಜ್ಜನ ಸಾಧು ಪೂಜೆಯ ವೇಳೆಗೆ ಮಜ್ಜಿಗೆಯೊಳಗಿನ ಬೆಣ್ಣೆಯಂತೆ
ಕನಕವೃಷ್ಟಿಯ ಕರೆಯುತ ಬಾರೆ ಮನಕೆ ಮಾನವ ಸಿದ್ಧಿಯ ತೋರೆ
ದಿನಕರ ಕೋಟಿ ತೇಜದಿ ಹೊಳೆಯುವ ಜನಕರಾಯನ ಕುಮಾರಿ ಬೇಗ
ಸಂಖ್ಯೆ ಇಲ್ಲದ ಭಾಗ್ಯವ ಕೊಟ್ಟು ಕಂಕಣ ಕೈಯ ತಿರುವುತ ಬಾರೆ
ಕುಂಕುಮಾಂಕಿತೆ ಪಂಕಜಲೋಚನೆ ವೆಂಕಟರಮಣನ ಬಿಂಕದ ರಾಣಿ
ಅತ್ತಿತ್ತಗಲದೆ ಭಕ್ತರ ಮನೆಯೊಳು ನಿತ್ಯ ಮಹೋತ್ಸವ ನಿತ್ಯ ಸುಮಂಗಳ
ಸತ್ಯವ ತೋರುತ ಸಾಧು ಸಜ್ಜನರ ಚಿತ್ತದಿ ಹೊಳೆಯುವ ಪುತ್ಥಳಿ ಗೊಂಬೆ
ಸಕ್ಕರೆ ತುಪ್ಪದ ಕಾಲುವೆ ಹರಿಸಿ ಶುಕ್ರವಾರದ ಪೂಜೆಯ ವೇಳೆಗೆ
ಅಕ್ಕರೆಯುಳ್ಳ ಅಳಗಿರಿರಂಗನ ಚೊಕ್ಕ ಪುರಂದರ ವಿಠ್ಠಲನ ರಾಣಿ
ಭಾಗ್ಯದ ಲಕ್ಷ್ಮಿ ಬಾರಮ್ಮ…
ಎಂಥ ಅಂದ ಎಂಥ ಚಂದ ಶಾರದಮ್ಮ …
ಭಾಗ್ಯದ ಲಕ್ಷ್ಮಿ ಬಾರಮ್ಮ-karaoke
Advertisement